BIG NEWS: ಲೋಕಸಭಾ ಚುನಾವಣೆ: ಕೊನೇ ಹಂತದ ಮತದಾನದ ವೇಳೆ ದಾಂಧಲೆ; ಕೊಳಕ್ಕೆ ಇವಿಎಂ ಯಂತ್ರ ಎಸೆದು ಆಕ್ರೋಶ

ಕೋಲ್ಕತ್ತಾ: ಲೋಕಸಭಾ ಚುನಾವಣೆಯ 7ನೇ ಹಂತದ ಹಾಗೂ ಕೊನೇ ಹಂತದ ಮತದಾನ ನಡೆಯುತ್ತಿದೆ. ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಪಂಚಾಬ್, ಒಡಿಸಾ, ಹಿಮಾಚಲಪ್ರದೇಶ ಸೇರಿದಂತೆ 57 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಈ ನಡುವೆ ಮತದಾನದ ವೇಳೆ ಪಶ್ಚಿಮ ಬಂಗಾಳದಲ್ಲಿ ಮತಗಟ್ಟೆಗಳಲ್ಲಿ ಹಂಸಾಚಾರ ನಡೆದಿದೆ.

ಪಶ್ಚಿಮ ಬಂಗಾಳದ 9 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಜಾಧವಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಐಎಸ್ ಎಫ್ ಹಾಗೂ ಸಿಪಿಐ(ಎಂ) ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ.

ಭಾಂಗಾರ್ ನ ಸತುಲಿಯಾ ಪ್ರದೇಶದಲ್ಲಿ ಎರಡೂ ಪಕ್ಷಗಳ ಬೆಂಬಲಿಗರ ನಡುವೆ ಗಲಾಟೆ ನಡೆದು, ಹಿಂಸಾಚಾರಕ್ಕೆ ತಿರುಗಿದೆ. ದಕ್ಷಿಣ 24ಪರಗಣ ಪ್ರದೇಶದಲ್ಲಿ ಕಿಡಿಗೇಡಿಗಳು ಮತಗಟ್ಟೆಗಳಿಗೆ ನುಗ್ಗಿ ದಾಂಧಲೆ ನಡೆಸಿದ್ದು, ಇವಿಎಂ ಗಳನ್ನು ಹೊತ್ತೊಯ್ದು ಕೊಳಕ್ಕೆ ಎಸೆದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read