HomeKarnatakaBIG NEWS: ಜಾತ್ಯಾತೀತ ಹೆಸರಿಟ್ಟುಕೊಂಡು ಕೋಮುವಾದಿಗಳ ಜೊತೆ ಮೈತ್ರಿ; JDS, ಬಿಜೆಪಿ 'ಬಿ' ಟೀಂ ಎಂಬುದು...

BIG NEWS: ಜಾತ್ಯಾತೀತ ಹೆಸರಿಟ್ಟುಕೊಂಡು ಕೋಮುವಾದಿಗಳ ಜೊತೆ ಮೈತ್ರಿ; JDS, ಬಿಜೆಪಿ ‘ಬಿ’ ಟೀಂ ಎಂಬುದು ಸಾಬೀತು; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರವಾಗಿ ಕಿಡಿ ಕಾರಿರುವ ಸಿಎಂ ಸಿದ್ದರಾಮಯ್ಯ, ಜಾತ್ಯಾತೀತ ಎಂದು ಹೆಸರಿಟ್ಟುಕೊಂಡು ಈಗ ಕೋಮುವಾದಿಗಳ ಜೊತೆ ಮೈತ್ರಿಗೆ ಜೆಡಿಎಸ್ ಮುಂದಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜೆಡಿಎಸ್ ಪಕ್ಷ ಬಿಜೆಪಿಯ ಬಿ ಟೀಂ ಎಂಬುದು ಈಗ ಸಾಬೀತಾಗಿದೆ. ಜಾತ್ಯಾತೀತ ಹೆಸರಿಟ್ಟುಕೊಂಡು ಕೋಮುವಾದಿಗಳ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ‘ಬಿ’ ಟೀಂ ಅಂತಾ ಹೇಳಿದ್ರೆ ಜೆಡಿಎಸ್ ನವರು ಕೋಪಗೊಳ್ಳುತ್ತಿದ್ದರು. ಈಗ ‘ಬಿ’ ಟೀಂ ಎಂಬುದು ಸಾಬೀತಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೋಕಸಭಾ ಚುನಾವಣೆಯಲ್ಲಿ ಯಾವ ಪಕ್ಷದ ಜೊತೆಗೂ ಮೈತ್ರಿ ಇಲ್ಲ ಎಂದು ಹೆಚ್.ಡಿ.ದೇವೇಗೌಡರು ಹೇಳುತ್ತಿದ್ದರು. ಈಗ ಬಿಜೆಪಿ ಜೊತೆ ಸೇರಿ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ. ಅಧಿಕಾರಕ್ಕಾಗಿ ಯಾರ ಜೊತೆಗಾದರೂ ಜೆಡಿಎಸ್ ನವರು ಸೇರಿಕೊಳ್ತಾರೆ ಎಂದು ವಾಕ್ಪ್ರಹಾರ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular