ಬೆಂಗಳೂರು: ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಅಧಿಕಾರಿಗಳು ಅಬಕಾರಿ ಡಿಸಿ ಕಚೇರಿಗಳ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು ನಗರದಲ್ಲಿ ಅಬಕಾರಿ ಇಲಾಖೆಯ 8 ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 1 ಅಬಕಾರಿ ಡಿಸಿ ಕಚೇರಿ, ಬೆಂಗಳೂ ನಗರ ಜಿಲ್ಲೆಗಳಲ್ಲಿ 8 ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್ ಪಿ ಶಿವಪ್ರಕಾಶ್ ದೇವರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ವಾರಂಟ್ ಮೂಲಕ ದಾಳಿ ನಡೆಸಿ ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಬಾರ್ ಲೈನ್ಸಸ್ ವಿಚಾರವಾಗಿ ಪರಿಶೀಲನೆ ನಡೆಸಲಾಗುತ್ತಿದೆ.

