ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳು ಹಾಗೂ ರಾಜಕಾರಣಿಗಳ ಪಾಲಿಗೆ ಸಿಂಹಸ್ವಪ್ನವಾಗಿದ್ದ ಲೋಕಾಯುಕ್ತದ ಖಡಕ್ ಐಪಿಎಸ್ ಅಧಿಕಾರಿ, ಬೆಂಗಳೂರು ನಗರ ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್ ದೇವರಾಜ್ ಅವರನ್ನು ರಾಜ್ಯ ಸರ್ಕಾರ ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಯಾವುದೇ ಹೊಸ ಹುದ್ದೆಯನ್ನು ತೋರಿಸದೆ ಅವರನ್ನು ಏಕಾಏಕಿ ಎತ್ತಂಗಡಿ ಮಾಡಿ ಆದೇಶ ಹೊರಡಿಸಲಾಗಿದ್ದು, ಈಗ ಸಾರ್ವಜನಿಕ ವಲಯದಲ್ಲಿ ಹಾಗೂ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಲೋಕಾಯುಕ್ತ ಎಸ್ ಪಿ ಶಿವಪ್ರಕಾಶ್ ದೇವರಾಜ್ ಅವರ ವೃತ್ತಿಜೀವನದಲ್ಲಿ ಇದು 9ನೇ ವರ್ಗಾವಣೆಯಾಗಿದೆ.

