ರಾಮನಗರ: ಲೋಕಾಯುಕ್ತ ಡಿವೈಎಸ್ ಪಿ ಹೆಸರಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಖತರ್ನಾಕ್ ಆರೋಪಿಯನ್ನು ರಾಮನಗರದ ಪೊಲೀಸರು ಬಂಧಿಸಿದ್ದಾರೆ.
ಐಜೂರು ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಬಂಧಿತನನ್ನು ಮುರೆಗಪ್ಪ ಎಂದು ಗುರುತಿಸಲಾಗಿದೆ. ಮಾಗಡಿ ಶಿಶು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗೆ ಕರೆ ಮಾಡಿದ್ದ ಆರೋಪಿ ಮುರಗೆಪ್ಪ, ತಾನು ಲೋಕಾಯುಕ್ತ ಡಿವೈ ಎಸ್ ಪಿ ಎಂದು ಹೇಳಿ ನಿಮ್ಮ ಕಚೇರಿ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದ.
ಈ ಬಗ್ಗೆ ಸಿಡಿಪಿಒ ಅಧಿಕಾರಿ ಸುರೇಂದ್ರ ಐಜೂರು ಠಾಣೆಯಲ್ಲಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಇದೀಗ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.