HomeKarnatakaಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ದಾಳಿ: ಕಂದಾಯ ನಿರೀಕ್ಷಕ ಅರೆಸ್ಟ್

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ದಾಳಿ: ಕಂದಾಯ ನಿರೀಕ್ಷಕ ಅರೆಸ್ಟ್

ಶಿವಮೊಗ್ಗ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಪ್ರತಿಭಾ ಎಂ ನಾಯ್ಕ ಕೋಂ ಮಹೇಶ್ ನಾಯ್ಕ ಎಂಬುವವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಇ-ಸ್ವತ್ತು ಮಾಡಿಸಲು ಲಂಚದ ಪಡೆದ ಸೊರಬ ಪುರಸಭೆ ಕಂದಾಯ ನಿರೀಕ್ಷಕ ವಿನಾಯಕ ಎಂಬುವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎನ್. ವಾಸುದೇವರಾಮರವರ ಮಾರ್ಗದರ್ಶನದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರತಿಭಾ ಎಂಬುವವರ ಹಳೇ ಸೊರಬ ಪುರಸಭೆ ವ್ಯಾಪ್ತಿಯಲ್ಲಿ ಇರುವ ಖಾಲಿ ನಿವೇಶನದ ಇ-ಸ್ವತ್ತು ಮಾಡಿಸಲು ಕಂದಾಯ ನಿರೀಕ್ಷಕ ವಿನಾಯಕರ ಅವರನ್ನು ಭೇಟಿ ಮಾಡಿ ಸೂಕ್ತ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಿರುತ್ತಾರೆ. ಈ ಸಂದರ್ಭ ಕಂದಾಯ ನಿರೀಕ್ಷಕರು 40000 ರೂ. ಲಂಚದ ಹಣಕ್ಕಾಗಿ ಬೇಡಿಕೆಯಿಟ್ಟಿದ್ದು, ಅರ್ಜಿದಾರರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುತ್ತಾರೆ.  ಈ ದೂರಿನನ್ವಯ ಪೊಲೀಸ್ ನಿರೀಕ್ಷಕ ಪ್ರಕಾಶ್‍ ಅವರ ತಂಡವು ಈತನನ್ನು ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಹಿಡಿದು ಹಣವನ್ನು ಜಪ್ತಿ ಮಾಡಿ, ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕಾರ್ಯಾಚರಣೆಯನ್ನು ಪೊಲೀಸ್ ಉಪಾಧೀಕ್ಷಕ ಉಮೇಶ ಈಶ್ವರ ನಾಯ್ಕ ಇವರ ನೇತೃತ್ವದಲ್ಲಿ ನಡೆಸಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಕಚೇರಿಯ ಪೊಲೀಸ್ ನಿರೀಕ್ಷಕರಾದ ಹೆಚ್.ಎಸ್. ಸುರೇಶ್, ಪೊಲೀಸ್ ಸಿಬ್ಬಂದಿಗಳಾದ ಮಹಂತೇಶ, ಸುರೇಂದ್ರ, ಯೋಗೀಶ್, ಬಿ.ಟಿ. ಚನ್ನೇಶ, ಪ್ರಶಾಂತ್‍ಕುಮಾರ್, ಅರುಣ್‍ಕುಮಾರ್, ದೇವರಾಜ, ರಘುನಾಯ್ಕ, ಕೆ.ಸಿ. ಜಯಂತ, ವಿ. ಗೋಪಿ, ಮತ್ತು ಪ್ರದೀಪ್ ಕುಮಾರ್, ಬಿ.ಕೆ. ಗಂಗಾಧರ ಭಾಗವಹಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular