HomeKarnatakaBIG NEWS: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಮೂವರು ಅಧಿಕಾರಿಗಳು: ಲೋಕಾಯುಕ್ತಕ್ಕೆ...

BIG NEWS: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಮೂವರು ಅಧಿಕಾರಿಗಳು: ಲೋಕಾಯುಕ್ತಕ್ಕೆ ದೂರು

ಮೈಸೂರು: ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮೈಸೂರಿನ ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಹಶೀಲ್ದಾರ್ ಶ್ರೀನಿವಾಸ್, ಅಂತರಸಂತೆ ನಾಡಕಚೇರಿ ರೆವೆನ್ಯೂ ಇನ್ಸ್ ಪೆಕ್ಟರ್ ಗೋವಿಂದರಾಜು, ಎನ್.ಬೆಳ್ತೂರು ಗ್ರಾಮ ಲೆಕ್ಕಿಗ ನಾಗರಾಜು ವಿರುದ್ಧ ಲೋಕಾಯುಕ್ತಕ್ಕೆ ದೂರು ದಾಖಲಾಗಿದೆ.

ಬಿ.ವಿ.ಮಮತಾ ಕುಮಾರಿ ಎಂಬುವವರಿಗೆ 50 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಗುಂಡತ್ತೂರು ಗ್ರಾಮದ ಸರ್ವೆ ನಂ.10ರ 5 ಎಗರೆ 1 ಗುಂಟೆ ಭೂಮಿ ವಿಚಾರವಾಗಿ ಅಧಿಕಾರಿಗಳು ಕೋರ್ಟ್ ಆದೇಶ ಉಲ್ಲಂಘಿಸಿ ಆಸ್ತಿ ಪರಭಾರೆ ಮಾಡಿದ್ದರು. ಆಸ್ತಿ ಹಚಿಕೆ ಮಾಡಿ ಮಾರಾಟ ಮಾಡಲು ಅನುವು ಮಾಡಿಕೊಟ್ಟಿದ್ದರು. ಬಳಿಕ ಹಿಂದಿನಂತೆ ದಾಖಲೆ ಯಥಾಸ್ಥಿತಿ ಕಾಪಾಡಿಕೊಳ್ಳಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ನಡುವೆ ಮೊದಲ ಹಂತವಾಗಿ 5 ಸಾವಿರ ರೂಪಾಯಿ ಫೋನ್ ಪೇ ಮಾಡಿಸಿಕೊಳ್ಳುತ್ತಿದ್ದಾಗ ಮೂವರು ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಮೂವರ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular