HomeKarnatakaಲೋಕಾಯುಕ್ತ ವಿಚಾರಣೆಗೆ ಅನುಮತಿ ನೀಡಲು ವಿಳಂಬ ಧೋರಣೆ ಸಲ್ಲದು; ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಲೋಕಾಯುಕ್ತ ವಿಚಾರಣೆಗೆ ಅನುಮತಿ ನೀಡಲು ವಿಳಂಬ ಧೋರಣೆ ಸಲ್ಲದು; ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಬೆಂಗಳೂರು: ಲೋಕಾಯುಕ್ತ ವಿಚಾರಣೆಗೆ ವಿವಿಧ ಪ್ರಾಧಿಕಾರಗಳಿಂದ ಅನುಮತಿ ವಿಳಂಬವಾಗುತ್ತಿರುವ ಬಗ್ಗೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಗ್ಗೆ ಕ್ರಮ ವಹಿಸುವಂತೆ ಸೂಚಿಸಿದರು.

ವಿವಿಧ ಪ್ರಕರಣಗಳಲ್ಲಿ ಲೋಕಾಯುಕ್ತ ವಿಚಾರಣೆಗೆ ಅನುಮತಿ ನೀಡಲು ವಿಳಂಬ ಧೋರಣೆ ಅನುಸರಿಸುತ್ತಿರುವುದು ಸಲ್ಲದು. ಇದರಿಂದ ಜನತೆಗೆ ತಪ್ಪು ಸಂದೇಶ ರವಾನೆಯಾಗುತ್ತದೆ. ಆದ್ದರಿಂದ ತ್ವರಿತ ತೀರ್ಮಾನ ಕೈಗೊಂಡು ಲೋಕಾಯುಕ್ತರಿಗೆ ಆದೇಶಗಳನ್ನು ಕಳುಹಿಸುವಂತೆ ಸೂಚಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಇದ್ದರು.

For Latest News Updates, Join Our Whatsapp Community🚩
RELATED ARTICLES

Most Popular