HomeKarnataka1 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಗ್ನಿಶಾಮಕ ಅಧಿಕಾರಿ

1 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಗ್ನಿಶಾಮಕ ಅಧಿಕಾರಿ

ಶಿವಮೊಗ್ಗ: 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಜಿಲ್ಲಾ ಅಗ್ನಿಶಾಮಕದಳ ಅಧಿಕಾರಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಅಶೋಕ್ ಕುಮಾರ್ ಬಲೆಗೆ ಬಿದ್ದವರು. ಲೋಕಾಯುಕ್ತ ದಾಳಿಯ ವೇಳೆ ರೆಡ್‌ ಹ್ಯಾಂಡಾಗಿ ಅವರು ಸಿಕ್ಕಿಬಿದ್ದಿದ್ದಾರೆ.

​ಶಿಕಾರಿಪುರ ಟೌನ್‌ ನಲ್ಲಿರುವ ಶಾಲೆಯೊಂದರ ಹೊಸ ಕಟ್ಟಡಕ್ಕೆ ಅಗ್ನಿಶಾಮಕ ದಳದಿಂದ ಪರವಾನಗಿ ಪಡೆಯಬೇಕಾಗಿತ್ತು. ಶಾಲಾ ಕಟ್ಟಡಕ್ಕೆ ಎನ್‌ಒಸಿ  ನೀಡಲು ಅಶೋಕ್ ಕುಮಾರ್ ಅವರು 1 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೂರುದಾರರಾದ ಅನೂಪ್ ಈ ಕುರಿತು ಶಿವಮೊಗ್ಗ ಲೋಕಾಯುಕ್ತ ಪೊಲೀಸರಿಗೆ ಮಾಹಿತಿ ನೀಡಿದ್ದರು. ​ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಇಂದು ದೂರುದಾರ ಅನೂಪ್ ಅವರಿಂದ ಅಗ್ನಿ ಶಾಮಕದಳ ಅಧಿಕಾರಿ ಅಶೋಕ್ ಕುಮಾರ್ ಹಣ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಹಣಸಮೇತ ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಬಿ.ಪಿ. ಚಂದ್ರಶೇಖರ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಲೋಕಾಯುಕ್ತ ಇನ್ಸ್‌ ಪೆಕ್ಟರ್‌ ಗಳಾದ ವೀರಬಸಪ್ಪ, ರುದ್ರೇಶ್ ಹಾಗೂ ಇತರ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಲೋಕಾಯುಕ್ತ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಸೆಪ್ಟೆಂಬರ್ 30 ಮತ್ತು ಅಕ್ಟೋಬರ್ 1 ರಂದು ಮಹಿಳಾ ದಸರಾ – ವೈವಿಧ್ಯಮಯ ಸ್ಪರ್ಧೆಗಳ ಆಯೋಜನೆ

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯ ಮಹಿಳಾ ದಸರಾ ಸಮಿತಿಯ ವತಿಯಿಂದ ನಾಡಹಬ್ಬ ದಸರಾ ಹಬ್ಬದ ಪ್ರಯುಕ್ತ ಮಹಾನಗರ ಪಾಲಿಕೆ ವ್ಯಾಪ್ತಿಯ ಮಹಿಳೆಯರಿಗಾಗಿ ಸೆಪ್ಟೆಂಬರ್ 30 ಹಾಗೂ ಅಕ್ಟೋಬರ್ 01 ರಂದು ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗದ ‘ವೀರಶೈವ ಕಲ್ಯಾಣ ಮಂದಿರ’ದಲ್ಲಿ ಮಹಿಳಾ ದಸರಾ, ಆಟೋಟ ಹಾಗೂ ವಿಶೇಷ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ಸ್ಪರ್ಧೆಗಳ ವಿವರಗಳು:

ದಿನಾಂಕ 30-09-2026: ಸಾಕ್ಷಾತ್ ದೇವಿ ಅಲಂಕಾರ ಸ್ಪರ್ಧೆ(ನಿಯಮಗಳೊಂದಿಗೆ), ವಿವಿಧ ವೈಯಕ್ತಿಕ ಆಟೋಟ ಸ್ಪರ್ಧೆಗಳು, ಅಂತ್ಯಾಕ್ಷರಿ ಹಾಗೂ ಮೆಹಂದಿ ಸ್ಪರ್ಧೆ.

ದಿನಾಂಕ 01-10-2026: ಕರ್ನಾಟಕದ ಸಾಂಪ್ರದಾಯಿಕ ಉಡುಗೆ ತೊಡುಗೆ ಸ್ಪರ್ಧೆ ಹಾಗೂ “ಮಹಾ ನಟಿಯರು” ಶಿವಮೊಗ್ಗ ಮಹಿಳಾ ದಸರಾ 2026 ಸ್ಪರ್ಧೆ ನಡೆಯಲಿವೆ.

“ಮಹಾ ನಟಿಯರು” ಶಿವಮೊಗ್ಗ ಮಹಿಳಾ ದಸರಾ 2026 ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ದಿನಾಂಕ 28-09-2026 ರೊಳಗಾಗಿ ತಮ್ಮ ಹೆಸರುಗಳನ್ನು ಮೊಬೈಲ್ ಸಂಖ್ಯೆಗಳಾದ 9738710364, 8495820268, 9480113313 ಗಳಿಗೆ ನೊಂದಾಯಿಸಿಕೊಳ್ಳಬೇಕಾಗಿ ಕೋರಲಾಗಿದೆ. 

ಈ ಕಾರ್ಯಕ್ರಮದಲ್ಲಿ ಪಾಲಿಕೆ ವ್ಯಾಪ್ತಿಯ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಮಹಿಳಾ ದಸರಾ ಸಮಿತಿ-2026ರ ಸದಸ್ಯ ಕಾರ್ಯದರ್ಶಿಗಳು ವಿನಂತಿಸಿದ್ದಾರೆ. 

ಸೆ.28 ರಿಂದ 30ರವರೆಗೆ ಬ್ಯಾಂಕ್ ಮುಷ್ಕರ: ಸೆ.27ರ ಭಾನುವಾರ ಬ್ಯಾಂಕ್ ಸೇವೆ ಲಭ್ಯ

ಶಿವಮೊಗ್ಗ: ಬ್ಯಾಂಕ್ ಸಂಘಗಳ ಸಂಯುಕ್ತ ವೇದಿಕೆ (UFBU) ಯು ಸೆ.28 ರಿಂದ 30ರ ವರೆಗೆ ದೇಶ ವ್ಯಾಪಿ ಮುಷ್ಕರ ಘೋಷಿಸಿರುವ ಹಿನ್ನೆಲೆಯಲ್ಲಿ, ಹಾಗೂ ಸೆ. 26 ಮತ್ತು 27 ರಂದು ವಾರದ ರಜೆ ಇರುವುದರಿಂದ ಬ್ಯಾಂಕ್ ಗ್ರಾಹಕರಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಲು, ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳ ಮತ್ತು ಗ್ರಾಮೀಣ ಬ್ಯಾಂಕುಗಳ ಶಾಖೆಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಲು ಆರ್‌ಬಿಐ ಅನುಮೋದನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ರಾಷ್ಟ್ರೀಕೃತ ಹಾಗೂ ಗ್ರಾಮೀಣ ಬ್ಯಾಂಕುಗಳ ಶಾಖೆಗಳು ದಿನಾಂಕ 27.09.2026 ರ ಭಾನುವಾರದಂದು ತೆರೆಯಲಿದ್ದು ಎಂದಿನಂತೆ ಕಾರ್ಯ ನಿರ್ವಹಿಸಲಿವೆ ಎಂದು ಲೀಡ್ ಬ್ಯಾಂಕ್ ಮ್ಯಾನೇಜರ್ ಹನುಮಂತಪ್ಪ ಪಿ. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular