HomeLatest NewsBREAKING: ದಾಳಿ ವೇಳೆ ಅಧಿಕಾರಿ ಬಳಿ ಕಂತೆ ಕಂತೆ ಹಣ ಪತ್ತೆ: ಎಣಿಕೆಗೆ ಯಂತ್ರ ತರಿಸಿಕೊಂಡ...

BREAKING: ದಾಳಿ ವೇಳೆ ಅಧಿಕಾರಿ ಬಳಿ ಕಂತೆ ಕಂತೆ ಹಣ ಪತ್ತೆ: ಎಣಿಕೆಗೆ ಯಂತ್ರ ತರಿಸಿಕೊಂಡ ಲೋಕಾಯುಕ್ತ ಪೊಲೀಸರು

ಚಿಕ್ಕಬಳ್ಳಾಪುರ: ಲೋಕಾಯುಕ್ತ ದಾಳಿಯ ವೇಳೆ ಅಧಿಕಾರಿಯ ಬಳಿ ಕಂತೆ ಕಂತೆ ಹಣ ಪತ್ತೆಯಾಗಿದ್ದು, ಎಣಿಕೆಗಾಗಿ ಯಂತ್ರ ತರಿಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕು ಕೃಷಿ ಅಧಿಕಾರಿ ಶಂಕರಯ್ಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿಕ್ಕಬಳ್ಳಾಪುರದ ಕೃಷಿ ಜಂಟಿ ನಿರ್ದೇಶಕರ ಕಚೇರಿಯಲ್ಲಿ ದಾಳಿ ಮಾಡಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಗುತ್ತಿಗೆದಾರ ಮಂಜುನಾಥ್ ಬಳಿ 3 ಲಕ್ಷ ರಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಅಧಿಕಾರಿ ಶಂಖರಯ್ಯ ಬ್ಯಾಗ್ ನಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ. ಹಣ ಎಣಿಸಲು ಅಧಿಕಾರಿಗಳು ಮಿಷನ್ ತರಿಸಿಕೊಂಡಿದ್ದಾರೆ.

ಒಂದು ಲಕ್ಷ ರೂ. ಲಂಚ ಮುಂಗಡವಾಗಿ ಪಡೆದಿದ್ದ ಶಂಕರಯ್ಯ, ನಂತರ 2 ಲಕ್ಷ ರೂಪಾಯಿ ಹಣವನ್ನು ಲಂಚವಾಗಿ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ರೇಡ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೋಕಾಯುಕ್ತ ಎಸ್ಪಿ ಆಂಟೋನಿ ಜಾನ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಕಚೇರಿ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular