ಕಾರವಾರ: ಲಂಚಕ್ಕೆ ಕೈಯೊಡ್ಡಿದಾಗಲೇ ನಗರಸಭೆ ಹಾಲಿ ಬಿಜೆಪಿ ಸದಸ್ಯ ಹಾಗೂ ಅಧಿಕಾರಿ ಇಬ್ಬರೂ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.
ಶಿರಸಿ ನಗರಸಭೆ ಹಾಲಿ ಬಿಜೆಪಿ ಸದಸ್ಯ, ಮಾಜಿ ಅಧ್ಯಕ್ಷ ಗಣಪತಿ ನಾಯ್ಕ್ ಹಾಗೂ ನಗರಸಭೆ ಅಧಿಕಾರಿ ಆರ್.ಎಂ.ವರ್ಣೇಕರ್ ಲೋಕಾಯುಕ್ತ ಬಲೆಗೆ ಬಿದ್ದವರು.
ಲೀಸ್ ಗೆ ಪಡೆದ ಜಾಗದ ವಿಷಯಕ್ಕೆ ಸಂಬಂಧಿಸಿದಂತೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿತ್ತು. ಇಂದು ರಮೇಶ್ ಹೆಗಡೆ ಎಂಬುವವರಿಂದ 3 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಇಬ್ಬರನ್ನೂ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಬಿಜೆಪಿ ಸದಸ್ಯ ಗಣಪತಿ ನಾಯ್ಕ್ ನಗರಸಭೆ ಪೈಪ್ ಕಳ್ಳತನ ಪ್ರಕರಣದಲ್ಲಿಯೂ ಆರೋಪಿಯಾಗಿದ್ದಾರೆ ಎಂದು ತಿಳಿದುಬಂದಿದೆ.
You Might Also Like
TAGGED:ಲೋಕಾಯುಕ್ತ