HomeKarnatakaBIG NEWS: ರಾಜ್ಯಾದ್ಯಂತ 40 ಕಡೆಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ದಾಳಿ

BIG NEWS: ರಾಜ್ಯಾದ್ಯಂತ 40 ಕಡೆಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಅಧಿಕಾರಿಗಳು 40 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

10 ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ, ಸಂಬಂಧಿಕರ ಮನೆಗಳ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ. ದಾಳಿ ವೇಳೆ ಸಿಕ್ಕ ಅಪಾರ ಪ್ರಮಾಣದ ಹಣ, ಒಡವೆ ಕಂಡು ಅಧಿಕರಿಗಳೇ ದಂಗಾಗಿದ್ದಾರೆ.

ಚಿಕ್ಕಮಗಳೂರು, ಮಂಡ್ಯ ಮೈಸೂರು, ಕೊಪ್ಪಳ, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಮಂಗಳೂರು, ಸೇರಿದಂತೆ ಹಲವೆಡೆ ದಾಳಿ ನಡೆಸಲಾಗಿದೆ. ಚಿಕ್ಕಮಗಳೂರಿನ ವಾಣಿಜ್ಯ ಅಧಿಕಾರಿ ನೇತ್ರಾವತಿ, ಮಂಡ್ಯ ಪಿಡಬ್ಲ್ಯು ಡಿ ಇಇ ಹರ್ಷ, ಮೈಸೂರಿನ ಮೂಡಾ ಇಂಜಿನಿಯರ್ ಯಜ್ಞೇಂದ್ರ, ಹಾಸನದ ಫುಡ್ ಇನ್ಸ್ ಪೆಕ್ಟರ್ ಜಗನ್ನಾಥ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಧಿಕಾರಿಗಳ ಆಪ್ತರು, ಸಂಬಂಧಿಕರ ಮನೆಗಳ ಮೇಲೂ ಲೋಕಾಯುಕ್ತ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular