ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಚಿವ ಭೈರತಿ ಸುರೇಶ್ ಅವರ ಪಿಎಸ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ಸಚಿವ ಪರ್ಸನಲ್ ಸಕ್ರೆಟರಿ ಆಗಿದ್ದ ಮಾರುತಿ ಬಗಲಿ ಮನೆ ಮೇಲೆ ಲೋಕಾಯುಕ್ತ ಅಧಿಅಕರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣ ಆಸ್ತಿ ದಾಖಲೆಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
ಈವರೆಗೆ 8 ನಿವೇಶನಗಳು, 5 ವಾಸ ಮನೆ, 19 ಎಕರೆ ಜಮೀನು ಆಸ್ತಿ ಪತ್ರಗಳು ಸೇರಿದಂತೆ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಮಾರುತಿ ಬಗಲಿ ಎರಡು ವರ್ಷಗಳ ಕಾಲ ಸಚಿವ ಭೈರತಿ ಸುರೇಶ್ ಅವರ ಪಿಎಸ್ ಆಗಿದ್ದರು. ಕಳೆದ ಮೂರು ತಿಂಗಳ ಹಿಂದಷ್ಟೇ ಕೆಲಸ ಬಿಟ್ಟಿದ್ದರು ಎಂದು ತಿಳಿದುಬಂದಿದೆ. ರಾಜ್ಯದ ಹಲವೆಡೆ ಭ್ರಷ್ಟ ಅಧಿಕಾರಿಗಳ ಮೇಲೆ ನಡೆಸಿದ ಲೋಕಾಯುಕ್ತ ದಾಳಿಯಲ್ಲಿ ಅಪಾರ ಪ್ರಮಾಣದ ಆಸ್ತಿ, ಚಿನ್ನಾಭರಣ, ನಗದು ಹಣ ವಶಕ್ಕೆ ಪಡೆಯಲಾಗಿದೆ.