HomeLatest NewsBIG NEWS: ರೆಡ್ ಹ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಗಣಿ ಮತ್ತು ಭೂ ವಿಜ್ಞಾನ...

BIG NEWS: ರೆಡ್ ಹ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ

ಬೆಳಗಾವಿ : 15 ಸಾವಿರ ಲಂಚಕ್ಕೆ ಕೈಯೊಡ್ಡಿದಾಗಲೇ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ರೆಡ್ ಹ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಫಯಾಜ್ ಅಹ್ಮದ್ ಶೇಖ್ ಲೋಕಾಯುಕ್ತ ಬಲೆಗೆ ಬಿದ ಅಧಿಕಾರಿ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ಜಪ್ತಿ ಮಾಡಲಾಗಿದ್ದ ಮರಳನ್ನು ಸಾಗಾಟ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಗುತ್ತಿಗೆದಾರನಿಗೆ ಟಾಸ್ಕ್ ಫೋರ್ಸ ಸಮೀತಿಯ ಸದಸ್ಯರ ಬೆಲೆ ನಿಗದಿ ಮಾಡಿ ಮರಳು ವಿಲೇವಾರಿ ಆದೇಶ ನೀಡಲು ಫಯಾಜ್ ಅಹ್ಮದ್‌ ಶೇಖ್ 15 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಶೀತಲ ಸನದಿ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಲಂಚದ ಹಣ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಫಯಾಜ್ ಖಾನ್ ಅವರನ್ನು ವಶಕ್ಕೆ ಪಡೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular