BIG NEWS: ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿಗಳು

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಪುರಸಭೆ ಸಮುದಾಯ ವ್ಯವಹಾರ ಅಧಿಕಾರಿ ಆರ್. ನಾಗೇಂದ್ರ ಲೋಕಾಯುಕ್ತ ಬಲೆಗೆ ಬಿದ್ದವರು.

ವಿಕಲಚೇತನರಿಗೆ ನೀಡಿದ ವಾಹನದ ಹಣ ಬಿಡುಗಡೆಗಾಗಿ 1.20 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರ್. ನಾಗೇಂದ್ರ 40,000 ರೂ. ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಮಂಡ್ಯ ಡಿವೈಎಸ್ಪಿ ಸುನಿಲ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ನಡೆಸಲಾಗಿದೆ.

ಹಾವೇರಿ ಮೂಲದ ಶಿವರಾಜ್ ಎಂಬುವರ ಬಳಿ ನಾಗೇಂದ್ರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಶ್ರೀರಂಗಪಟ್ಟಣ ಪುರಸಭೆ ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಬೆಂಗಳೂರು ನಗರದ ಕೆಆರ್ ಪುರಂ ಪೂರ್ವ ತಾಲೂಕು ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಸರ್ವೆ ಅಧಿಕಾರಿ ಮೂರ್ತಿ ನಾಯಕ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಮೀನಿನ ಸರ್ವೆ ಮಾಡಲು ರೈತನಿಂದ 7000 ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read