HomeKarnatakaBIG NEWS: ಲಂಚಕ್ಕೆ ಕೈಯೊಡ್ದಿದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ಕಾರ್ಯಪಾಲಕ ಅಭಿಯಂತರ

BIG NEWS: ಲಂಚಕ್ಕೆ ಕೈಯೊಡ್ದಿದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ಕಾರ್ಯಪಾಲಕ ಅಭಿಯಂತರ

ಬೆಳಗಾವಿ: 10 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಖಾನಾಪುರದ ಪಂಚಾಯತ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.

ದುರದುಂಡೇಶ್ವರ ಮಹಾದೇವ ಬನ್ನೂರ ಬಂಧಿತ ಸಹಾಯಕ ಕಾರ್ಯಪಾಲಕ ಅಭಿಯಂತರ. ನೀಲಾವಡೆ ಗ್ರಾಮ ಪಂಚಾಯತಿಯ ನರೇಗಾ ಕಾಮಗಾರಿಗಳಿಗೆ ತಾಂತ್ರಿಕ ಅನುಮೋದನೆ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಗ್ರಾಮ ಪಂಚಾಯಿತಿ ಸದಸ್ಯ ವಿನಾಯಕ ಮಲ್ಲಪ್ಪ ಮುತಗೇಕರ ಅವರಿಂದ ಕಚೇರಿಯಲ್ಲಿಯೇ 10,000 ರೂಪಾಯಿ ಲಂಚದ ಹಣ ಪಡೆಯುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಸಹಾಯಕ ಕಾರ್ಯಪಾಲಕ ಅಭಿಯಂತರ ದುರದುಂಡೇಶ್ವರ ಮಹಾದೇವನನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular