ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಜಿಲ್ಲಾ ಖಜಾನಾಧಿಕಾರಿಗಳ ಕಚೇರಿಯ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ. ವೀರಪ್ಪ ಮತ್ತು ತಂಡದಿಂದ ದಾಳಿ ನಡೆಸಲಾಗಿದ್ದು, ದಾಳಿಯ ವೇಳೆ ಜಿಲ್ಲಾ ಖಜಾನಾಧಿಕಾರಿ ಪ್ರಭಾವತಿಯವರ ಬಳಿ 1.5 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. 1.5 ಲಕ್ಷ ರೂಪಾಯಿ ನಗದು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಸಮೀಪ ಇರುವ ಬೆಂಗಳೂರು ಗ್ರಾಮಾಂತರ ಡಿಸಿ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.

