BREAKING: ಲಂಚ ಸ್ವೀಕರಿಸುವಾಗಲೇ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ

ಶಿವಮೊಗ್ಗ: ಶಿವಮೊಗ್ಗ ತಾಲೂಕು ಕಸಬಾ -1 ಹೋಬಳಿ, ಗಾಡಿಕೊಪ್ಪ ವೃತ್ತ ಗ್ರಾಮ ಅಡಳಿತ ಅಧಿಕಾರಿ ಸುರೇಶ್ ಜಿ. ಎಂಬುವವರು ಜಮೀನು ಖಾತೆ ಮಾಡಿಕೊಡಲು ಆರು ಸಾವಿರ ರೂ.ಗಳ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

ನಗರದ ಕೃಷಿನಗರ ವಾಸಿ ಸಂಕೇತ್ ಎಂಬುವವರು ಖರೀದಿಸಿದ ಜಮೀನನ್ನು ತನ್ನ ತಾಯಿ ವೀಣಾ ಬಿ.ಎಂ. ಎಂಬುವವರ ಹೆಸರಿಗೆ ನೋಂದಣಿ ಮಾಡಿಸಿಕೊಂಡಿರುತ್ತಾರೆ. ಶಿವಮೊಗ್ಗ ವಿನೋಬನಗರ ಪ್ರೀಡಂ ಪಾರ್ಕ್‍ನಲ್ಲಿರುವ ಗ್ರಾಮ ಆಡಳಿತ ಅಧಿಕಾರಿಗಳ ಕಚೇರಿ ಹೋಗಿ ವಿಎ ಆಗಿರುವ ಸುರೇಶ್ ಜಿ. ಬಳಿ ತಾವು ಖರೀದಿಸಿದ ಜಮೀನನ್ನು ಖಾತೆ ಮಾಡಿಕೊಡುವಂತೆ ಕೇಳಿಕೊಂಡಾಗ ಕೆಲಸ ಮಾಡಿಕೊಡಲು 6000 ರೂ. ಲಂಚಕ್ಕೆ ಬೇಡಿಕೆ ಇಟ್ಟಿರುವ ವಿಚಾರವಾಗಿ ಇವರ ವಿರುದ್ಧ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು.

ಅಪಾದಿತರನ್ನು ಬಂಧಿಸಿ ಮುಂದಿನ ತನಿಖೆಯನ್ನು ಪೊಲೀಸ್ ನಿರೀಕ್ಷಕರು ವೀರಬಸಪ್ಪ ಎಲ್. ಕುಸಲಾಪುರ ಅವರು ಕೈಗೊಂಡಿರುತ್ತಾರೆ. ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಮಂಜುನಾಥ್ ಚೌಧರಿ ಎಂ.ಹೆಚ್. ಮತ್ತು ಪೊಲೀಸ್ ಉಪಾಧೀಕ್ಷಕ ಉಮೇಶ ಈಶ್ವರ ನಾಯ್ಕ ಇವರ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಕಚೇರಿ ಸಿಬ್ಬಂದಿಗಳಾದ ವಿ.ಎ. ಮಹಂತೇಶ, ಯೋಗೇಶ್, ಸುರೇಂದ್ರ, ಬಿ.ಟಿ ಚನ್ನೇಶ್, ಪ್ರಶಾಂತ್‍ಕುಮಾರ್, ರಘುನಾಯ್ಕ, ದೇವರಾಜ್, ಗಂಗಾಧರ, ಪ್ರದೀಪ್, ಗೋಪಿ ವಿ., ಜಯಂತ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read