HomeKarnatakaಡಿಸಿ ಕಚೇರಿಯಲ್ಲೇ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ದಾಳಿ: ಕೆಎಎಸ್ ಅಧಿಕಾರಿ ಸೇರಿ ಇಬ್ಬರು ವಶಕ್ಕೆ

ಡಿಸಿ ಕಚೇರಿಯಲ್ಲೇ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ದಾಳಿ: ಕೆಎಎಸ್ ಅಧಿಕಾರಿ ಸೇರಿ ಇಬ್ಬರು ವಶಕ್ಕೆ

ದಾವಣಗೆರೆ: ದಾವಣಗೆರೆ ವಿಶೇಷ ಭೂಸ್ವಾಧೀನಾಧಿಕಾರಿ ಮತ್ತು ಕಚೇರಿ ವ್ಯವಸ್ಥಾಪಕ 30,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ವಿಶೇಷ ಭೂಸ್ವಾದಿನಾಧಿಕಾರಿ ರಮೇಶ್, ಕಚೇರಿ ವ್ಯವಸ್ಥಾಪಕ ಶ್ರೀನಿವಾಸ ಅವರು ಬಲೆಗೆ ಬಿದ್ದವರು ಎಂದು ಹೇಳಲಾಗಿದೆ. ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯ ಕಟ್ಟಡದಲ್ಲಿರುವ ಭೂಸ್ವಾಧೀನಾಧಿಕಾರಿ ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಚೇರಿಯಲ್ಲಿ ಅವರು ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡಲು ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲೇ ದಾಳಿ ನಡೆಸಲಾಗಿದೆ. ಹಾವೇರಿ ತಾಲೂಕಿನ ಕೋಳೂರಿನ ಸಂತೋಷ್ ಅವರಿಂದ ಲಂಚ ಸ್ವೀಕರಿಸುತ್ತಿದ್ದ ಹಿರಿಯ ಕೆಎಎಸ್ ಅಧಿಕಾರಿ ಜಿ.ಡಿ. ಶೇಖರ್ ಮತ್ತು ಕಚೇರಿ ವ್ಯವಸ್ಥಾಪಕ ಶ್ರೀನಿವಾಸ ಬಲೆಗೆ ಬಿದ್ದಿದ್ದಾರೆ.

ಹಾವೇರಿ, ದಾವಣಗೆರೆ ಸೇರಿದಂತೆ 6 ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ದಾವಣಗೆರೆಯ ವಿಶೇಷ ಭೂಸ್ವಾಧೀನಾಧಿಕಾರಿ ಜಿ.ಡಿ. ಶೇಖರ್, ಶ್ರೀನಿವಾಸ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್. ಕೌಲಾಪುರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular