HomeKarnatakaBIG NEWS: ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಬಿಗ್ ಶಾಕ್, ರಾಜ್ಯದ ಹಲವೆಡೆ ಏಕಕಾಲದಲ್ಲಿ ದಾಳಿ

BIG NEWS: ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಬಿಗ್ ಶಾಕ್, ರಾಜ್ಯದ ಹಲವೆಡೆ ಏಕಕಾಲದಲ್ಲಿ ದಾಳಿ

ಬೆಂಗಳೂರು: ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದಾರೆ. ರಾಜ್ಯಾದ್ಯಂತ ವಿವಿಧೆಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ವಿರುದ್ಧ ಸಮರ ಸಾರಿದ್ದು, ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಬೆಂಗಳೂರು, ಬಳ್ಳಾರಿ, ತುಮಕೂರು, ಮಂಡ್ಯ, ವಿಜಯನಗರ, ಕೋಲಾರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಎರಡು ಕಡೆ ಲೋಕಾಯುಕ್ತ ದಾಳಿ ನಡೆದಿದೆ.

ಕುಂದಣ ಪಿಡಿಒ ಪದ್ಮನಾಭ್ ಅವರಿಗೆ ಸೇರಿದ ಮೂರು ಮನೆಗಳ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಲಾಗಿದೆ. ದಾಬಸ್ ಪೇಟೆ ಹಾಗೂ ತುಮಕೂರಿನ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಜಯನಗರ ಜಿಲ್ಲೆಯ ಬೆಸ್ಕಾಂ ಜನರಲ್ ಮ್ಯಾನೇಜರ್ ನಾಗರಾಜ್ ಹಾಗೂ ಅವರ ಸಂಬಂಧಿಕರ ಮನೆ ಮೇ ಲೆ ದಾಳಿ ನಡೆಸಲಾಗಿದೆ. ನಾಗರಾಜ್ ಅಕ್ರಮ ಆಸ್ತಿ ಹಾಗೂ ಫೆಟ್ರೋಲ್ ಬಂಕ್, ಜಮೀನು ಖರೀದಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಬಿಬಿಎಂಪಿ ಅಧಿಕಾರಿ ಮಂಜೇಶ್ ಹಾಗೂ ಅವರ ಸಂಬಂಧಿಕರ ಮನೆ ಮೆಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ಮುಂದುವರೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular