HomeKarnatakaBIG NEWS: ಲೋಕಾಯುಕ್ತ ದಾಳಿ: ಹಣದ ಗಂಟನ್ನು ಕಿಟಕಿಯಿಂದ ಹೊರಗೆ ಎಸೆದ ಇಂಜಿನಿಯರ್

BIG NEWS: ಲೋಕಾಯುಕ್ತ ದಾಳಿ: ಹಣದ ಗಂಟನ್ನು ಕಿಟಕಿಯಿಂದ ಹೊರಗೆ ಎಸೆದ ಇಂಜಿನಿಯರ್

ಹಾವೇರಿ: ಲೋಕಾಯುಕ್ತ ಅಧಿಕಾರಿಗಳು ಬೆಳಿಗ್ಗೆಯಿಂದಲೇ ರಾಜ್ಯದ ವಿವಿಧೆಡೆ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ.

ಹಾವೇರಿಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ ನೇತೃತ್ವದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್ ಮನೆ ಮೇಲೆ ದಾಳಿ ನಡೆಸಲಾಗಿದೆ. ಇನ್ನೊಂದೆಡೆ ರಾಜ್ಯ ಪಂಚಾಯತ್ ಇಂಜಿನಿಯರಿಂಗ್ ಸಹಾಯಕ ಇಂಜಿನಿಯರ್ ಕಾಶಿನಾಥ್ ಭಜಂತ್ರಿ ಮನೆ ಮೇಲೆ ದಾಳಿ ನಡೆದಿದೆ.

ಇಬ್ಬರು ಅಧಿಕಾರಿಗಳ ಮನೆ, ಕಚೇರಿ, ಫಾರ್ಮ್ ಹೌಸ್ ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಇಂಜಿನಿಯರ್ ಕಾಶಿನಾಥ್ ಭಜಂತ್ರಿ ಲಕ್ಷ ಕ್ಷ ಹಣವನ್ನು ತನ್ನ ಬೆಡ್ ರೂಂ ನಲ್ಲಿ ಹಾಸಿಗೆ ಕೆಳಗೆ ಬಚ್ಚಿಟ್ಟಿದ್ದಾರೆ. ಅಧಿಕಾರಿಗಳು ಮನೆ ಮೇಲೆ ದಾಳಿ ನಡೆಸುತ್ತಿದ್ದಂತೆ 9 ಲಕ್ಷ ರೂಪಾಯಿ ಹಣವನ್ನು ಎರಡು ಗಂಟ್ ಗಳಲ್ಲಿ ಕಟ್ಟಿ ಕಿಟಕಿಯಿಂದ ಹೊರಗೆ ಬಿಸಾಕಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೋಕಾಯುಕ್ತ ದಾಳಿ ವೇಳೆ ಕಾಶಿನಾಥ್ ಭಜಂತ್ರಿ ನಿವಾಸದಲ್ಲಿ ಅಪಾರ ಪ್ರಮಾಣದ ಹಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ

For Latest News Updates, Join Our Whatsapp Community🚩
RELATED ARTICLES

Most Popular