HomeKarnatakaBIG NEWS: ಬಿಬಿಎಂಪಿ ಅಧಿಕಾರಿ, ಬೆಸ್ಕಾಂ ಇಂಜಿನಿಯರ್, ಆರೋಗ್ಯ ಇಲಾಖೆ ಅಧಿಕಾರಿಗಳ ಮನೆ ಮೇಲೂ ಲೋಕಾಯುಕ್ತ...

BIG NEWS: ಬಿಬಿಎಂಪಿ ಅಧಿಕಾರಿ, ಬೆಸ್ಕಾಂ ಇಂಜಿನಿಯರ್, ಆರೋಗ್ಯ ಇಲಾಖೆ ಅಧಿಕಾರಿಗಳ ಮನೆ ಮೇಲೂ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಬೆಸ್ಕಾಂ, ಮಹಾನಗರ ಪಾಲಿಕೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ರಾಯಚೂರು, ಗದಗ, ಕೊಪ್ಪಳ, ಚಿತ್ರದುರ್ಗ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ಈಸ್ಟ್ ಸರ್ಕಲ್ ಬೆಸ್ಕಾಂ ಸೂಪರಿಂಟೆಂಡೆಂಟ್ ಎಂಜಿನಿಯರ್ ಲೋಕೇಶ್ ಬಾಬು ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಬಿಬಿಎಂಪಿ ವಸಂತಪುರ ವಾರ್ಡ್ ಕಂದಾಯ ನಿರೀಕ್ಷಕ ಸುರೇಶ್ ಬಾಬು, ಬಿಬಿಎಂಪಿ ಯಲಹಂಕ ವಲಯದ ತೆರಿಗೆ ನಿರೀಕ್ಷಕ ಕೃಷ್ಣಪ್ಪ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಗ್ರಾಮಾಂತರ ಆರೋಗ್ಯಾಧಿಕಾರಿ ಎಂ.ಸಿ.ಸುನೀಲ್ ಕುಮಾರ್ ಅವರ ಮನೆ, ಕಲಬುರಗಿ ಪಾಲಿಕೆ ಉಪ ಆಯುಕ್ತ ಆರ್.ಪಿ ಜಾದವ ಅವರ ಮನೆ, ಫಾರ್ಮ್ ಹೌಸ್ ಗಳ ಮೇಲೂ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular