HomeKarnatakaBREAKING: ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್: ಪಿಡಿಒ, ಸಬ್ ರಿಜಿಸ್ಟ್ರಾರ್ ಸೇರಿ...

BREAKING: ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್: ಪಿಡಿಒ, ಸಬ್ ರಿಜಿಸ್ಟ್ರಾರ್ ಸೇರಿ ಹಲವರ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಬಾಗಲಕೋಟೆಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಪಿಡಿಒ ಎಸ್.ಪಿ. ಹಿರೇಮಠ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.

ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ಹೊಲಗೇರಿ ಗ್ರಾಮ ಪಂಚಾಯಿತಿ ಪಿಡಿಒ ಹಿರೇಮಠ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಐಷಾರಾಮಿ ಮನೆ, ಅಪಾರ ಪ್ರಮಾಣದ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಹಿರೇಮಠ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ರಾಯಚೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಿಲ್ಲಾ ಪಂಚಾಯತಿ ಲೆಕ್ಕಪತ್ರ ಸಹಾಯಕ ಅಧಿಕಾರಿ ನರಸಿಂಗರಾವ್ ಅವರ ಮನೆಯ ಮೇಲೆ ದಾಳಿ ನಡೆಸಲಾಗಿದೆ. ರಾಯಚೂರು ನಗರದ ಜವಾರ್ ಕಾಲೋನಿಯಲ್ಲಿರುವ ಅವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬೆಳಗಾವಿಯ ಪ್ರಭಾರಿ ಸಬ್ ರಿಜಿಸ್ಟ್ರಾರ್ ಸಚಿನ್ ಮಂಡೇದ್ ಅವರ ಬೆಳಗಾವಿ ನಗರದ ಆನಗೋಳದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಮನೆ, ಕಚೇರಿ ಸೇರಿ ಮೂರು ಕಡೆಗಳಲ್ಲಿ ದಾಳಿ ನಡೆಸಲಾಗಿದೆ.

ರಾಯಬಾಗ ತಾಲೂಕಿನ ಹಾರೂಗೇರಿ ವೆಟರ್ನರಿ ಇನ್ಸ್ಪೆಕ್ಟರ್ ಸಂಜಯ್ ಮನೆ ಮೇಲೆ ದಾಳಿ ಮಾಡಲಾಗಿದೆ. ಸಂಜಯ್ ನಿವಾಸದ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular