ಬೆಂಗಳೂರು: ಲಂಚದ ಹಣಕ್ಕೆ ಕೈಯೊಡ್ಡಿದಾಗಲೇ ಪೊಲೀಸ್ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಹಿಳಾ ಪಿಎಸ್ ಐ ಹಾಗೂ ಕಾನ್ಸ್ ಟೇಬಲ್ ಇಬ್ಬರೂ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದಿದೆ.
ಪೋಕ್ಸೋ ಕೇಸ್ ನಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 70 ಸಾವಿರ ಹಣಕ್ಕೆ ಬೇಡಿಕೆ ಇಡಲಾಗಿತ್ತು. ಅದರಲ್ಲಿ 50 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲಂಚದ ಹಣದ ಸಮೇತ ಪೊಲೀಸ್ ಸಿಬ್ಬಂದಿ ಅಮರೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ದಾಳಿ ವೇಳೆ ಮಹಿಳಾ ಪಿಎಸ್ ಐ ಜಗದೇವಿ ಹಾಗೂ ಕಾನ್ಸ್ ಟೇಬಲ್ ಮಂಜುನಾಥ್ ಪರಾರಿಯಾಗಿದ್ದಾರೆ.
ಲೋಕಾಯುಕ್ತ ಎಸ್ ಪಿ ವಂಶಿಕೃಷ್ಣ ನೇತೃತ್ವದಲ್ಲಿ ಈ ದಾಳಿ ನಡೆದಿದೆ.