HomeKarnatakaBREAKING NEWS: ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

BREAKING NEWS: ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದ ಹಲವು ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಆದಾಯ ಮೇರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ, ದಾವಣಗೆರೆ, ಬೆಂಗಳೂರು ಸೇರಿದಂತೆ ಹಲವು ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಹೊಳಲ್ಕೆರೆ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಕೆ. ಮಹೇಶ್ ಮಹೇಶ್, ಅವರ ಪತ್ನಿ ಬಿಬಿಎಂಪಿ ಎಇ ಹೆಚ್. ಭಾರತಿ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ. ದಾವಣಗೆರೆಯ ಜಯನಗರದಲ್ಲಿರುವ ಮಹೇಶ್ ಮನೆ ಮೇಲೆ, ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಸಣ್ಣ ನೀರಾವರಿ ಇಲಾಖೆ, ಬೆಂಗಳೂರಿನ ಬಿಬಿಎಂಪಿ ಕಚೇರಿ ಮೇಲೆಯೂ ದಾಳಿ ನಡೆಸುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದಾಯ ಮೀರಿ ಅಕ್ರಮ ಆಸ್ತಿ ಸಂಪಾದನೆ ದೂರು ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular