HomeKarnatakaದಂಗಾಗುವಂತಿದೆ ತಹಶೀಲ್ದಾರ್ ಆಸ್ತಿ: ರಾತ್ರಿಯಿಡಿ ಮುಂದುವರೆದ ಪರಿಶೀಲನೆ

ದಂಗಾಗುವಂತಿದೆ ತಹಶೀಲ್ದಾರ್ ಆಸ್ತಿ: ರಾತ್ರಿಯಿಡಿ ಮುಂದುವರೆದ ಪರಿಶೀಲನೆ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ಕೆಆರ್ ಪುರ ತಹಶೀಲ್ದಾರ್ ಎಸ್. ಅಜಿತ್ ಕುಮಾರ್ ರೈ ಮನೆ ಮೇಲೆ ಲೋಕಾಯುಕ್ತ ಪೊಲೀಸರು ನಿನ್ನ ಬೆಳಗ್ಗೆ ದಾಳಿ ನಡೆಸಿದ್ದು, ದಾಳಿಯ ಸಂದರ್ಭದಲ್ಲಿ 40 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ.

1.9 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಪತ್ತೆ ಹಚ್ಚಲಾಗಿದ್ದು, ಬೇನಾಮಿ ಹೆಸರಲ್ಲಿ ದೊಡ್ಡಬಳ್ಳಾಪುರದಲ್ಲಿ ನೂರಾರು ಎಕರೆ ಜಾಗ ಖರೀದಿಸಿರುವುದು ಗೊತ್ತಾಗಿದೆ. ಎಲ್ಲಾ ಆಸ್ತಿಗಳನ್ನು ಸಹೋದರ ಮತ್ತು ಸಂಬಂಧಿ ಹೆಸರಲ್ಲಿ ಖರೀದಿಸಿದ್ದಾರೆ. ಅವರ ಬಳಿ ಐಷಾರಾಮಿ ಕಾರ್ ಗಳು ಇವೆ. ಎರಡೂವರೆ ಕೋಟಿ ರೂಪಾಯಿ ಮೌಲ್ಯದ ಲ್ಯಾಂಡ್ ಕ್ರೂಸರ್, 4 ಫಾರ್ಚುನರ್ ಮತ್ತು ನಾಲ್ಕು ಥಾರ್ ವಾಹನಗಳು ಇವೆ. ಪರಿಶೀಲನೆ ಕಾರ್ಯ ಮುಂದುವರಿದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ ಬೆಳಗ್ಗೆಯಿಂದಲೂ ದಾಖಲೆಗಳ ಪರಿಶೀಲನಾ ಕಾರ್ಯ ಮುಂದುವರೆದಿದೆ. ಅಜಿತ್ ಅವರಿಗೆ ಸಂಬಂಧಿಸಿದ 10 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಜಿತ್ ರೈಗೆ ಸೇರಿದ ನೂರು ಎಕರೆಗೂ ಅಧಿಕ ವಿವಿಧ ಆಸ್ತಿಗಳು ಪತ್ರಗಳು ಪತ್ತೆಯಾಗಿದೆ. ಬೆಂಗಳೂರಿನ ಸಹಕಾರ ನಗರದ ಮನೆಯಲ್ಲಿ ರಾತ್ರಿಯಿಡಿ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular