BREAKING: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್: ರಾಜ್ಯಾದ್ಯಂತ ಏಕಕಾಲಕ್ಕೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯದ 12 ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ.

ಶಿವಮೊಗ್ಗ, ಯಾದಗಿರಿ, ತುಮಕೂರು ಸೇರಿದಂತೆ 54 ಸ್ಥಳಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಬೆಂಗಳೂರು ನಗರದ ಆರು ಅಧಿಕಾರಿಗಳ ಮೇಲೆ ದಾಳಿ ನಡೆಸಲಾಗಿದೆ.

ಬೆಂಗಳೂರು, ಮೈಸೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಶಿವಮೊಗ್ಗ, ಯಾದಗಿರಿ, ತುಮಕೂರಿನಲ್ಲಿ ಏಕಕಾಲಕ್ಕೆ 100ಕ್ಕೂ ಅಧಿಕ ಲೋಕಾಯುಕ್ತ ಅಧಿಕಾರಿಗಳ ತಂಡದಿಂದ ದಾಳಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಯಾದಗಿರಿ, ತುಮಕೂರಿನಲ್ಲಿ ತಲಾ ಒಬ್ಬ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆದಿದೆ. ದಾಳಿ ನಡೆಸಿದ ಅಧಿಕಾರಿಗಳು ಅಕ್ರಮ ಆಸ್ತಿಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಸಂಪಾದನೆ ಹಿನ್ನಲೆಯಲ್ಲಿ ದಾಳಿ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read