ತುಮಕೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ತುಮಕೂರಿನಲ್ಲಿಯೂ ಲೋಕಾಯುಕ್ತ ದಾಳಿ ನಡೆದಿದೆ. ಕೆಐಎಡಿಬಿ ಎಇಇ ರಾಜೇಶ್ ಅವರ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ತುಮಕೂರಿನ ಎಐಟಿ ಕಾಲೇಜು ಬಳಿ ಇರುವ ಕೆಐಎಡಿಬಿ ಕಚೇರಿಯಲ್ಲಿ ಎಇಇ ರಾಜೇಶ್ ಅವರ ಕೊಠಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಅಕ್ರಮ ಆಸ್ತಿಗಳಿಕೆ ಆರೋಪದ ಹಿಲ್ಲೆಯಲ್ಲಿ ಈ ದಾಳಿ ನಡೆದಿದೆ.
ಎಇಇ ರಾಜೇಶ್ ಬೆಂಗಳೂರಿನಲ್ಲಿ ನಿವಾಸ ಹೊಂದಿದ್ದು, ಒಂದು ತಿಂಗಳ ಹಿಂದಷ್ಟೆ ತುಮಕೂರು ಕೆಐಎಡಿಬಿ ಕಚೇರಿಗೆ ವರ್ಗಾವಣೆಗೊಂಡಿದ್ದರು. ಇನ್ನು ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು, ಮೈಸೂರು, ಬಳ್ಳಾರಿ, ಕೊಪ್ಪಳ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಲೋಕಾಯುಕ್ತ, ದಾಳಿ, ತುಮಕೂರು,