BREAKING NEWS: ಲಂಚಕ್ಕೆ ಕೈಯೊಡ್ಡಿದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಮೂವರು ಅಧಿಕಾರಿಗಳು: ಓರ್ವ ಪರಾರಿ

ದೇವನಹಳ್ಳಿ: ಜಮೀನು ಪೌತಿ ಖಾತೆ ಮಾಡಿಕೊಡಲು 2.5 ಲಕ್ಷ ರೂಪಾಯಿ ಲಂಚಕ್ಕೆ ಕೈಯೊಡ್ಡಿದಾಗಲೇ ಮೂವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ವಿಜಯಪುರದಲ್ಲಿ ನಡೆದಿದೆ.

ಎಲುವಳ್ಳಿ ವಿಎ ಮಡಿವಾಳಪ್ಪ, ವಿಜಯಪುರ ವೃತ್ತ ವಿಎ ಸುನಿಲ್ ಲೋಕಾಯುಕ್ತ ಬಲೆಗೆ ಬಿದ್ದವರು. ಒನ್ನೋರ್ವ ಅಧಿಕಾರಿ ಆರ್ ಐ ಸತ್ಯನಾರಾಯಣ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ.

ದೇವನಹಳ್ಳಿ ತಾಲೂಕಿನ ವಿಜಯಪುರ ನಾಡಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಬ್ಬರು ಅಧಿಕಾರಿಗಳನ್ನು ಬಂಧಿಸಲಾಗಿದ್ದು, ಓರ್ವ ಎಸ್ಕೇಪ್ ಆಗಿದ್ದಾರೆ.

ಜಮೀನು ಪೌತಿ ಖಾತೆ ಮಾಡಿಕೊದಲು ಗೌತಮ್ ಎಂಬುವವರ ಬಳಿ ಮೂವರು ಅದಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲೋಕಾಯುಕ್ತ ಎಸ್ ಪಿ ಪವನ್ ನೆಜ್ಜೂರು ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read