ಬೆಂಗಳೂರು: ಬೆಂಗಳೂರಿನಲ್ಲಿ ಸರ್ಕಾರಿ ವಕೀಲೆಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. 5 ಸಾವಿರ ರೂಪಾಯಿ ಲಂಚಕ್ಕೆ ಕೈಯೊಡ್ದಿದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಸರ್ಕಾರಿ ವಕೀಲೆ ಸವಿತಾ ನವೀನ್ ಪಾಟೀಲ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಸವಿತಾ ನವೀನ್ ಬೆಂಗಳೂರಿನ 54ನೇ ಸಿಸಿಹೆಚ್ ಕೋರ್ಟ್ ನ ಸರ್ಕಾರಿ ವಕೀಲೆ. ಅತ್ಯಾಚಾರ ಪ್ರಕರಣದಲ್ಲಿ ಆಕ್ಷೇಪಣೆ ಸಲ್ಲಿಸಲು ದೂರುದಾರರಿಂದ 5 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಕಚೇರಿಯಲ್ಲಿಯೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಸದ್ಯ ವಕೀಲೆ ಸವಿತಾ ನವೀನ್ ಅವರನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

