BIG NEWS: ಪೊಲೀಸ್ ಕಾನ್ಸ್ ಟೇಬಲ್, BBMP AE ನಿವಾಸದ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಆದಯ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಭ್ರಷ್ಟರ ವಿರುದ್ಧ ಸಮರ ಸಾರಿದ್ದಾರೆ.

ಬೆಂಗಳೂರು, ಬೀದರ್, ಚಿತ್ರದುರ್ಗ ಸೇರಿದಂತೆ ಹಲವೆಡೆ ಏಕಕಾಲದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಿತ್ರದುರ್ಗದ ಹೊಳಲ್ಕೆರೆಯ ಸಣ್ಣನೀರಾವರಿ ಇಲಾಖೆ ಇಂಜಿನಿಯರ್ ಕೆ.ಮಹೇಶ್ ಹಾಗೂ ಪತ್ನಿ ಬಿಬಿಎಂಪಿ ಎ.ಇ ಹೆಚ್. ಭಾರತಿ ಅವರ ಮನೆ ಮೇಲೆ ಲೋಕಾಯುಕ್ತ ಎಸ್ ಪಿ ವಾಸುದೇವರಾವ್ , ಡಿವೈಎಸ್ ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆದಿದೆ.

ಮಹೇಶ್ ಅವರ ದಾವಣಗೆರೆ ಜಿಲ್ಲೆಯ ಜಯನಗರದಲ್ಲಿರುವ ಮನೆ ಮೇಲೂ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದಾರೆ.

ಇದೇ ವೇಳೆ ಬೀದರ್ ಜಿಲ್ಲೆಯಲ್ಲಿ ಪೊಲೀಸ್ ಕಾನ್ಸ್ ಸ್ಟೇಬಲ್ ವಿಜಯ್ ಕುಮಾರ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅಕ್ರಮ ಆಸ್ತಿಗಳಿಗೆ ಆರೋಪ ಹಿನ್ನೆಲೆಯಲ್ಲಿ ಚಿಟಗುಪ್ಪ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ವಿಜಯ್ ಕುಮಾರ್ ಅವರ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ಟೀಚರ್ ಕಾಲೋನಿಯ ನಿವಾಸದ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read