ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಕೋಲಾರ, ದಾವಣಗೆರೆ ಸೇರಿದಂತೆ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಗ್ಗೆಯೇ ಶಾಕ್ ನೀಡಿದ್ದಾರೆ.
ಕೋಲಾರ ಜಿಲ್ಲೆಯ ಹಲವೆಡೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೋಲಾರದ ಸರ್ವೆ ಸೂಪರ್ವೈಸರ್ ಸುರೇಶ್ ಬಾಬು ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಸರ್ವೆ ಇಲಾಖೆ ಅಧಿಕಾರಿ ಸುರೇಶ್ ಬಾಬು ಸೇರಿದಂತೆ ಒಟ್ಟು 6 ಕಡೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ . ಲೋಕಾಯುಕ್ತ ಎಸ್ಪಿ ಧನಂಜಯ ನೇತೃತ್ವದಲ್ಲಿ ದಾಳಿ ನಡೆದಿದೆ.ಕೋಟ್ಯಾಂತರ ರೂಪಾಯಿ ಅಕ್ರಮ ಆಸ್ತಿಗಳಿಗೆ ಆರೋಪದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ದಾವಣಗೆರೆಯಲ್ಲಿ ಕೂಡ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ಸರ್ಕಾರಿ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ನೀರು ಸರಬರಾಜು ಇಲಾಖೆಯ ಸಹಾಯಕ ಇಂಜಿನಿಯರ್ ಬಿ. ರವಿ ಕಚೇರಿ ಹಾಗೂ ಅವರ ತಾಯಿ ನಿವಾಸದ ಮೇಲೆ ದಾಳಿ ನಡೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.