ಬೆಂಗಳೂರು : ಬೆಂಗಳೂರಲ್ಲಿ ಹಿರಿಯ ಐಎಎಸ್ (IAS) ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹಿರಿಯ ಐಎಎಸ್ ಅಧಿಕಾರಿ ವಾಸಂತಿ ಅಮರ್ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಬಹಳ ದಿನಗಳ ನಂತರ ಐಎಎಸ್ ಮನೆ ಮೇಲೆ ದಾಳಿ ನಡೆದಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಈ ದಾಳಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.ಆರ್ ಟಿ ನಗರದಲ್ಲಿರುವ ವಾಸಂತಿ ಅಮರ್ ಮನೆ ಮೇಲೆ ದಾಳಿ ನಡೆದಿದೆ. ಸರ್ಕಾರಿ ಜಮೀನು ಅಕ್ರಮವಾಗಿ ಬೇರೆಯವರ ಹೆಸರಿಗೆ ವರ್ಗಾವಣೆ ಮಾಡುತ್ತಿರುವ ಆರೋಪ ಕೇಳಿಬಂದಿದೆ.
ಮೈಸೂರು, ಬಳ್ಳಾರಿ, ಬೆಂಗಳೂರು, ಹುಬ್ಬಳ್ಳಿ ಸೇರಿ ರಾಜ್ಯದ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.ಆರ್ ಟಿ ನಗರದಲ್ಲಿರುವ ವಾಸಂತಿ ಅಮರ್ ಮನೆ ಮೇಲೆ ದಾಳಿ ನಡೆದಿದೆ. ಸರ್ಕಾರಿ ಜಮೀನು ಅಕ್ರಮವಾಗಿ ಬೇರೆಯವರ ಹೆಸರಿಗೆ ವರ್ಗಾವಣೆ ಮಾಡುತ್ತಿರುವ ಆರೋಪ ಕೇಳಿಬಂದಿದೆ.