HomeKarnatakaಒಂದು ಲಕ್ಷ ರೂ. ಲಂಚಕ್ಕೆ ಬೇಡಿಕೆ: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PSI

ಒಂದು ಲಕ್ಷ ರೂ. ಲಂಚಕ್ಕೆ ಬೇಡಿಕೆ: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PSI

ಹಾಸನ: ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಎಸ್ ಐ ಓರ್ವರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಳೇಬೀಡು ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ್ ಲೋಕಾಯುಕ್ತ ಬಲೆಗೆ ಬಿದ್ದವರು. ಲಂಚದ ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎನ್‌ಸಿಆರ್ ಪ್ರಕರಣವೊಂದನ್ನು ಇತ್ಯರ್ಥಪಡಿಸಲು ಪಿಎಸ್‌ಐ ಮಂಜುನಾಥ್ ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಬೇಡಿಕೆಯ ಕುರಿತು ಮಾಹಿತಿ ಪಡೆದ ಲೋಕಾಯುಕ್ತ ತಂಡ ಕಾರ್ಯಾಚರಣೆಗೆ ಇಳಿದಿತ್ತು. ಹೋಟೆಲ್‌ ವೊಂದರಲ್ಲಿ ದೂರುದಾರರಿಂದ ಮುಂಗಡವಾಗಿ 20 ಸಾವಿರ ರೂಪಾಯಿ ಹಣವನ್ನು ಪಿಎಸ್‌ಐ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಅವರನ್ನು ವಶಕ್ಕೆ ಪಡೆದಿದ್ದಾರೆ.

ಲಂಚದ ಹಣ ಸಮೇತ ಪಿಎಸ್‌ಐ ಮಂಜುನಾಥ್‌ ಅವರನ್ನು ಬಂಧಿಸಲಾಗಿದ್ದು, ಲೋಕಾಯುಕ್ತ ಇನ್ಸ್‌ಪೆಕ್ಟರ್‌ಗಳಾದ ಶಿಲ್ಪಾ ಮತ್ತು ಗವಿರಾಜು ಅವರ ನೇತೃತ್ವದಲ್ಲಿ ಈ ಯಶಸ್ವಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular