HomeKarnatakaBIG NEWS: ಕಾರ್ಮಿಕ ಇಲಾಖೆ ಸಹಾಯಕ ನಿರ್ದೇಶಕನ ಮನೆ ಮೇಲೆ ಲೋಕಾಯುಕ್ತ ದಾಳಿ; ಅಪಾರ ಪ್ರಮಾಣದ...

BIG NEWS: ಕಾರ್ಮಿಕ ಇಲಾಖೆ ಸಹಾಯಕ ನಿರ್ದೇಶಕನ ಮನೆ ಮೇಲೆ ಲೋಕಾಯುಕ್ತ ದಾಳಿ; ಅಪಾರ ಪ್ರಮಾಣದ ನಗದು ಹಣ, ಚಿನ್ನಾಭರಣ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಭ್ರಷ್ಟರ ವಿರುದ್ಧ ಸಮರ ಸಾರಿದ್ದಾರೆ. 70ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ಕಾರ್ಮಿಕ ಇಲಾಖೆ ಸಹಾಯಕ ನಿರ್ದೇಶಕರ ಮನೆ ಮೇಲೂ ದಾಳಿ ನಡೆದಿದೆ. ಕಾರ್ಮಿಕ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್ ಅವರ ಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳಿಗೆ ಬರೋಬ್ಬರಿ 8 ಲಕ್ಷ ರೂಪಾಯಿ ನಗದು ಹಣ ಪತ್ತೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

200 ಗ್ರಾಂ ಚಿನ್ನಾಭರಣ, ಸತ್ತೇಗಾಲ ಬಳಿ 7 ಎಕರೆ ಫಾರ್ಮ್ ಹೌಸ್ ಹೊಂದಿರುವ ಬಗ್ಗೆ ದಾಖಲೆಗಳು ಪತ್ತೆಯಾಗಿವೆ. ಶ್ರೀನಿವಾಸ್ ಬಳಿ ಟ್ರ್ಯಾಕ್ಟರ್, ಕ್ವಾಲಿಸ್ ಕಾರು ಕೂಡ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular