HomeKarnataka8,500 ರೂಪಾಯಿ ಲಂಚಕ್ಕೆ ಕೈಯೊಡ್ದಿದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ವಿಲೇಜ್ ಅಕೌಂಟೆಂಟ್

8,500 ರೂಪಾಯಿ ಲಂಚಕ್ಕೆ ಕೈಯೊಡ್ದಿದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ವಿಲೇಜ್ ಅಕೌಂಟೆಂಟ್

ಹಾವೇರಿ: ಖಾತೆ ಬದಲಾವಣೆಗೆ 8,500 ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ವಿಲೇಜ್ ಅಕೌಂಟೆಂಟ್ ಓರ್ವರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.

ಹಾವೇರಿ ತಾಲೂಕಿನ ನೆಗಳೂರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿ ಫಕಿರೇಶ್ ಬಾರ್ಕಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಬಸಾಪುರ ಗ್ರಾಮದ ರೈತ ಕರಿಯಪ್ಪ ಕೆಸರಳ್ಳಿ ಎಂಬುವವರ ಜಮೀನಿನ ಖಾತೆ ಬದಲಾವಣೆ ಮಾಡಿಕೊಡಲು ಫಕಿರೇಶ್, 63,000 ರೂಪಾಯಿಗೆ ಬೇಡಿಕೆ ಇಟ್ಟಿದ್ದರು. 30 ಸಾವಿರ ರೂಪಾಯಿ ಹಣವನ್ನು ಮೊದಲೇ ಪಡೆದುಕೊಂಡಿದ್ದರು. ಇಂದು 8,500 ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೇಳೆ ಫಕಿರೇಶ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಸಿಪಿಐ ಶ್ರೀದೇವಿ ಪಾಟೀಲ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಸದ್ಯ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular