Loksabha Election: ಹೋಮ ಹವನದ ಮೊರೆ ಹೋದ ಶಾಮನೂರು ಕುಟುಂಬ

 

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಚಿವ ಮಲ್ಲಿಕಾರ್ಜುನ್ ಅವರ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್ ಕಣಕ್ಕಿಳಿದಿದ್ದಾರೆ. ಅವರ ಎದುರಾಳಿ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಸಿದ್ದೇಶ್ವರ್ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ್ ಸ್ಪರ್ಧಿಸಿದ್ದಾರೆ.

ಸಂಸದ ಸಿದ್ದೇಶ್ವರ್ ವಿರುದ್ಧ ಮುನಿಸಿಕೊಂಡಿದ್ದ ಬಿಜೆಪಿ ಮಾಜಿ ಶಾಸಕ ರೇಣುಕಾಚಾರ್ಯ ಸೇರಿದಂತೆ ಹಲವರು ಬಂಡಾಯದ ಬಾವುಟ ಹಾರಿಸಲು ಮುಂದಾಗಿದ್ದರು. ಆದರೆ ಯಡಿಯೂರಪ್ಪನವರ ಮಧ್ಯ ಪ್ರವೇಶದಿಂದ ಸಮಸ್ಯೆ ಸರಿಯಾಗಿದ್ದು, ಗಾಯತ್ರಿ ಸಿದ್ದೇಶ್ವರ್ ಪರ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ.

ಇನ್ನು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವಿನಯ್ ಕುಮಾರ್, ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದರು. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆಯಿಸಿ ಮಾತನಾಡಿದ್ದರೂ ಸಹ ಇದಕ್ಕೆ ಮಣಿಯದೆ ಇದೀಗ ವಿನಯ್ ಕುಮಾರ್, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಇದರ ಮಧ್ಯೆ ಶಾಮನೂರು ಕುಟುಂಬಸ್ಥರು, ಪ್ರಭಾ ಮಲ್ಲಿಕಾರ್ಜುನ್ ಗೆಲುವಿಗೆ ಪ್ರಾರ್ಥಿಸಿ ಹೋಮ ಹವನ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read