ಮುಂಬೈ: ಭಾನುವಾರ ಮಹಾರಾಷ್ಟ್ರದ ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪವಿರುವ ಜಲಪಾತದಲ್ಲಿ ಕೊಚ್ಚಿ ಹೋಗಿದ್ದ ಐವರ ಮೃತದೇಹ ಪತ್ತೆಯಾಗಿದೆ.
ಭಾನುವಾರ ಮಧ್ಯಾಹ್ನ ಕುಟುಂಬವೊಂದು ವಿಹಾರಕ್ಕೆಂದು ಹೋಗಿದ್ದ ವೇಳೆ ಜಲಪಾತದಲ್ಲಿ ಕೊಚ್ಚಿ ಹೋಗಿದ್ದರು. ಕೂಡಲೇ ಶೋಧ ಮತ್ತು ರಕ್ಷಣಾ ತಂಡಗಳು ಅಲ್ಲಿಗೆ ಧಾವಿಸಿ ನೀರಲ್ಲಿ ನಾಪತ್ತೆಯಾದವರಿಗಾಗಿ ಹುಡುಕಾಟ ಆರಂಭಿಸಿತ್ತು. ಮಹಿಳೆ ಮಗು ಸೇರಿ ಐವರ ಶವಗಳನ್ನು ರಕ್ಷಣಾ ಸಿಬ್ಬಂದಿ ಹೊರ ತೆಗೆದಿದ್ದಾರೆ.
ಹಡಪ್ಸರ್ ಪ್ರದೇಶದ ಅನ್ಸಾರಿ ಕುಟುಂಬದ ಸದಸ್ಯರು ಭೂಶಿ ಅಣೆಕಟ್ಟಿಗೆ ವಿಹಾರಕ್ಕೆ ಹೋಗಿದ್ದರು. ಅವರು ಅಣೆಕಟ್ಟಿನ ಸಮೀಪವಿರುವ ಜಲಪಾತವನ್ನು ನೋಡಲು ಹೋಗಿದ್ದು, ಆ ಪ್ರದೇಶದಲ್ಲಿ ತೀವ್ರವಾದ ಮಳೆಯಿಂದಾಗಿ ನೀರಿನ ಹರಿವು ಹೆಚ್ಚಾದಾಗ ಅವರ ಗಮನಕ್ಕೆ ಬರಲಿಲ್ಲ. ಹೀಗಾಗಿ ನೀರಲ್ಲಿ ಕೊಚ್ಚಿ ಹೋಗಿದ್ದಾರೆ. ಘಟನೆಯ ವಿಡಿಯೋ ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
VIDEO | Visuals of five persons who drowned in a waterfall close to the backwater of Bhushi Dam in Pune's Lonavala area earlier today.
Officials said that the incident happened at 12:30pm when a family was out for a picnic at the scenic spot. They said the bodies of Shahista… pic.twitter.com/qOmk0qQHPa
— Press Trust of India (@PTI_News) June 30, 2024

