HomeKarnatakaಶಾಸಕ ಬೈರತಿ ಬಸವರಾಜ್ ವಿರುದ್ಧ ಲುಕೌಟ್ ನೋಟಿಸ್

ಶಾಸಕ ಬೈರತಿ ಬಸವರಾಜ್ ವಿರುದ್ಧ ಲುಕೌಟ್ ನೋಟಿಸ್

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಹಿನ್ನೆಲೆಯಲ್ಲಿ ಕೆಆರ್ ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ.

ಶಾಸಕರ ಬಂಧನಕ್ಕೆ ಸೇರಿ ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಬೈರತಿ ಬಸವರಾಜ್ ಹುಡುಕಾಟ ನಡೆಸಲಾಗಿದೆ. ಬೈರತಿ ಬಸವರಾಜ್ ಮಹಾರಾಷ್ಟ್ರದ ಸ್ಟಾರ್ ಹೋಟೆಲ್ ವೊಂದರಲ್ಲಿ ವಾಸ್ತವ್ಯ ಹೂಡಿರುವ ಮಾಹಿತಿ ದೊರೆತಿದ್ದು, ವಿಶೇಷ ತಂಡಗಳು ಅಲ್ಲಿಗೆ ತೆರಳಿವೆ.

ಬೈರತಿ ಬಸವರಾಜ್ ವಿದೇಶಕ್ಕೆ ಪರಾರಿಯಾಗದಂತೆ ತಡೆಯಲು ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ. ಕಳೆದ ಡಿಸೆಂಬರ್ ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ನಲ್ಲಿ ಬೈರತಿ ಬಸವರಾಜ್ ಅರ್ಜಿ ಸಲ್ಲಿಸಿದ್ದರು. ಆಗ ಹೈಕೋರ್ಟ್ ಅರ್ಜಿ ತಿರಸ್ಕರಿಸಿದ್ದು, ಶಾಸಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಸಿಐಡಿ ಪೊಲೀಸರು ಸಿದ್ಧತೆ ನಡೆಸಿದ್ದರು. ಆಗ ಕೂಡ ಶಾಸಕ ಭರತಿ ಬಸವರಾಜ್ ತಲೆಮರೆಸಿಕೊಂಡಿದ್ದರು. ಮತ್ತೊಮ್ಮೆ ಅವರು ಮೇಲ್ಮನವಿ ಸಲ್ಲಿಸಿದಾಗ ಶಾಸಕರ ವಿರುದ್ಧ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್ ಸೂಚನೆ ನೀಡಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2025ರ ಜುಲೈ 15ರಂದು ರೌಡಿಶೀಟರ್ ಬಿಕ್ಲು ಶಿವ ಕೊಲೆ ಮಾಡಲಾಗಿತ್ತು. ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಳೆದ ಡಿಸೆಂಬರ್ ನಲ್ಲಿಯೂ ಬೈರತಿ ಬಸವರಾಜ್ ವಿರುದ್ಧ ಲುಕೌಟ್ ನೋಟಿಸ್ ಜಾರಿ ಮಾಡಲಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular