ಬೆಂಗಳೂರು : ರೌಡಿಶೀಟರ್ ಬಿಕ್ಲುಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಶಾಸಕ ಭೈರತಿ ಬಸವರಾಜ್ ಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದ್ದು, ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ ಇದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಭೈರತಿ ಬಸವರಾಜ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಬೆನ್ನಲ್ಲೇ ಭೈರತಿ ಬಸವರಾಜ್ ಗೆ ಶಾಸಕ ಭೈರತಿ ಬಸವರಾಜ್ ಗೆ ಸಿಐಡಿ ಅಧಿಕಾರಿಗಳು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದು, ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ ಇದೆ. ಕಳೆದ 1 ವಾರದಿಂದ ಭೈರತಿ ಸುರೇಶ್ ನಾಪತ್ತೆಯಾಗಿದ್ದು, ಗೋವಾ , ಮಹಾರಾಷ್ಟ್ರ ಸೇರಿದಂತೆ ಹಲವು ಕಡೆ ಶೋಧ ನಡೆಸಲಾಗುತ್ತಿದೆ.
ಬಿಕ್ಲುಶಿವ ಕೊಲೆ ಪ್ರಕರಣದಲ್ಲಿ ಇತ್ತೀಚೆಗೆ ಹೈಕೋರ್ಟ್ ಭೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ವಿಚಾರಣಾಧೀನ ನ್ಯಾಯಾಲಯದ ಮೊರೆ ಹೋಗಬಹುದು ಎಂದು ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಭೈರತಿ ಬಸವರಾಜ್ ಜನಪ್ರತಿನಿಧಿಗಳ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಜನಪ್ರತಿನಿಧಿಗಳ ನ್ಯಾಯಾಲಯ ಕೂಡ ಭೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಬಂಧನ ಭೀತಿ ಇನ್ನಷ್ಟು ಹೆಚ್ಚಾಗಿದೆ. ಬಂಧನ ಭೀತಿಯಲ್ಲಿರುವ ಭೈರತಿ ಬಸವರಾಜ್ ತಲೆಮರೆಸಿಕೊಂಡಿದ್ದು, ಜಾಮೀನಿಗಾಗಿ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.

