ಶ್ರೀರಾಮನ ಶಕ್ತಿ, ಹನುಮನ ಭಕ್ತಿಯ ಕೆಣಕಿದ ರಾವಣನೇ ಉಳಿಯಲಿಲ್ಲ, ರಾಜಣ್ಣ ಯಾವ ಲೆಕ್ಕ? : ಬಿಜೆಪಿ ತಿರುಗೇಟು

ಬೆಂಗಳೂರು : ಶ್ರೀರಾಮನ ಶಕ್ತಿ, ಹನುಮನ ಭಕ್ತಿಯ ಕೆಣಕಿದ ರಾವಣನೇ ಉಳಿಯಲಿಲ್ಲ, ಇನ್ನೂ ರಾಜಣ್ಣ ಯಾವ ಲೆಕ್ಕ? ಎಂದು ಬಿಜೆಪಿ ತಿರುಗೇಟು ನೀಡಿದೆ.

ಶ್ರೀ ರಾಮನ ಬಗ್ಗೆ ಸಚಿವ ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದಕ್ಕೆ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ.

ಶ್ರೀರಾಮನ ಶಕ್ತಿ, ಹನುಮನ ಭಕ್ತಿಯ ಕೆಣಕಿದ ರಾವಣನೇ ಉಳಿಯಲಿಲ್ಲ, ರಾಜಣ್ಣ ಯಾವ ಲೆಕ್ಕ? ಹಿಂದೂ ಧರ್ಮವನ್ನು ಅವಹೇಳನ ಮಾಡುವುದು, ಹಿಂದೂ ಭಾವನೆಗಳಿಗೆ ಧಕ್ಕೆ ಉಂಟುಮಾಡುವುದು ಕಾಂಗ್ರೆಸ್ ಪಕ್ಷಕ್ಕೆ ಅಂಟಿದ ಕುಷ್ಠ ರೋಗವಿದ್ದಂತೆ. ಶತ ಶತಮಾನಗಳ ಕೋಟ್ಯಂತರ ರಾಮಭಕ್ತರ ಹೋರಾಟ, ಸಹಸ್ರಾರು ಕರಸೇವಕರ ಬಲಿದಾನಗಳಿಂದ ಭವ್ಯ ರಾಮಮಂದಿರದಲ್ಲಿ ಬಾಲರಾಮ ನೆಲೆಸುತ್ತಿರುವ ಸಮಯದಲ್ಲಿ, ಶ್ರೀರಾಮ ಸೀತೆಯರನ್ನು ಗೊಂಬೆಗೆ ಹೋಲಿಸುತ್ತಿರುವ ಸಹಕಾರ ಸಚಿವ ರಾಜಣ್ಣರವರೇ, ನಾಡಿನ ಜನರಷ್ಟೇ ಅಲ್ಲ, ನಿಮ್ಮನ್ನು ಕಾಂಗ್ರೆಸ್ ಕಾರ್ಯಕರ್ತರೂ ಕ್ಷಮಿಸಲಾರರು! ಅಧಿಕಾರದ ಮದ, ಕಾಂಗ್ರೆಸ್ ಗುಲಾಮಿತನದಿಂದ ಹೊರಬಂದು, ನಿಮ್ಮ ಕ್ಷೇತ್ರದ ಮತದಾರರನ್ನಾದರೂ ಕೇಳಿ, ನಿಮ್ಮ ಕುಟುಂಬಸ್ಥರನ್ನಾದರೂ ಕೇಳಿ ತಿಳಿಯಿರಿ ಎಂದು ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read