HomeLatest NewsBIG NEWS: ರಸ್ತೆಗುಂಡಿ ತಪ್ಪಿಸಲು ಹೋಗಿ ಕೆರೆಗೆ ಬಿದ್ದ ಲಾರಿ ಪ್ರಕರಣ: ನೀರಿನಲ್ಲಿ ಮುಳುಗಿ ಚಾಲಕ...

BIG NEWS: ರಸ್ತೆಗುಂಡಿ ತಪ್ಪಿಸಲು ಹೋಗಿ ಕೆರೆಗೆ ಬಿದ್ದ ಲಾರಿ ಪ್ರಕರಣ: ನೀರಿನಲ್ಲಿ ಮುಳುಗಿ ಚಾಲಕ ಸಾವು

ಆನೇಕಲ್: ರಸ್ತೆಗುಂಡಿ ತಪ್ಪಿಸಲು ಹೋಗಿ ಜಲ್ಲಿ ಕಲ್ಲುತುಂಬಿದ್ದ ಲಾರಿ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಘಟನೆಯಲ್ಲಿ ನಾಪತ್ತೆಯಾಗಿದ್ದ ಲಾರಿ ಚಾಲಕ ಸಾವನ್ನಪ್ಪಿರುವುದು ದೃಢಪಟ್ಟಿದೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ-ಸರ್ಜಾಪುರ ರಸ್ತೆಯಲ್ಲಿ ಬಿದರಿಗುಪ್ಪೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಕೆರೆಗೆ ಬಿದ್ದಿತ್ತು. ಘಟನೆಯಲ್ಲಿ ಲಾರಿ ಚಾಲಕ ನಾಪತ್ತೆಯಾಗಿದ್ದ. ಘಟನಾ ಸ್ಥಳಕ್ಕೆ ತೆರಳಿದ ಪೊಲೀಸರು ಕ್ರೇನ್ ಸಹಾಯದಿಂದ ಲಾರಿಯನ್ನು ಮೇಲಕೆತ್ತಿದ್ದಾರೆ. ಈ ವೇಳೆ ಲಾರಿ ಚಾಲನ ಶವ ಕೂಡ ಪತ್ತೆಯಾಗಿದೆ.

ಕಲಬುರಗಿ ಮೂಲದ ಲಾರಿ ಚಾಲಕ ಮಹೇಶ್ (37) ಮೃತ ದುರ್ದೈವಿ. ಅತ್ತಿಬೆಲೆಯ ಆಕ್ಸ್ ಫರ್ಡ್ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular