ವಿಜಯನಗರ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದ ಲಾರಿ ಏಕಾಏಕಿ ಬೆಂಕಿಯಲ್ಲಿ ಹೊತ್ತಿ ಉರಿದ ಘಟನೆ ವಿಜಯನಗರದಲ್ಲಿ ನಡೆದಿದೆ.
ವಿಜಯನಗರದ ಕೂಡ್ಲಗಿ ತಾಲೂಕಿನ ಶಿವಪುರ ಬಳಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಲಾರಿ ಬೀಳುತ್ತಿದ್ದಂತೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು ಧಗಧಗನೆ ಉರಿಯಲಾರಂಭಿಸಿದೆ.
ಲಾರಿ ಹೊಸಪೇಟೆಯಿಂದ ಚಿತ್ರದುರ್ಗ ಮಾರ್ಗವಾಗಿ ಹೋಗುತ್ತಿತ್ತು. ಈ ವೇಳೆ ಈ ಘಟನೆ ನಡೆದಿದೆ. ರಸ್ತೆಯಲ್ಲಿ ಲಾರಿ ಬೀಳುತ್ತಿದ್ದಂತೆ ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ.