HomeLatest NewsBIG NEWS: ಕಬ್ಬು ಸಾಗಿಸುತ್ತಿದ್ದ ಲಾರಿ- ಆಟೋ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

BIG NEWS: ಕಬ್ಬು ಸಾಗಿಸುತ್ತಿದ್ದ ಲಾರಿ- ಆಟೋ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

ಚಾಮರಾಜನಗರ: ಕಬ್ಬು ಸಾಗಿಸುತ್ತಿದ್ದ ಲಾರಿ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದ ಯಳಂದೂರು ಮಾರ್ಗ ಮಧ್ಯೆ ಈ ದುರಂತ ಸಂಭವಿಸಿದೆ. ಸುಮಂತ್ (22) ಹಾಗೂ ನಿತಿನ್ ಕುಮಾರ್ (16) ಮೃತ ದುರ್ದೈವಿಗಳು.

ಕಬ್ಬು ಸಾಗಿಸುತ್ತಿದ್ದ ಲಾರಿ ಹಾಗೂ ಟೊಮೆಟೊ ತುಂಬಿಕೊಂಡು ಹೋಗುತ್ತಿದ್ದ ಆಟೋ ನಡುವೆ ಡಿಕ್ಕಿಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular