HomeKarnatakaBIG NEWS: ಟಿಪ್ಪರ್ ಲಾರಿ-ಬೈಕ್ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

BIG NEWS: ಟಿಪ್ಪರ್ ಲಾರಿ-ಬೈಕ್ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

ಬೆಂಗಳೂರು: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದ ಬಿಲ್ಲಿನಕೋಟೆಯಲ್ಲಿ ನಡೆದಿದೆ.

ಟಿಪ್ಪರ್ ಲಾರಿ- ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರನ ಮೇಲೆಯೇ ಹರಿದು ಹೋಗಿದೆ. ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ.

ಅಪಘಾತದ ಬಳಿಕ ಟಿಪ್ಪರ್ ಲಾರಿ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ನೆಲಮಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular