HomeKarnatakaBIG NEWS: ಬೈಕ್-ಲಾರಿ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

BIG NEWS: ಬೈಕ್-ಲಾರಿ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ವಿಜಯಪುರ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಬಳಿ ನಡೆದಿದೆ.

ಮನಗೂಳಿ ನಿವಾಸಿ ಭೀಮಶಿ ಹಿಟ್ನಳ್ಳಿ (56) ಹಾಗೂ ಖಂಡೋಬಾ (60) ಮೃತರು. ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಇಬ್ಬರು ಬೈಕ್ ಸವಾರರ ಸಾವಿನಿಂದ ಉದ್ರಿಕ್ತಗೊಂಡ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಪ್ರತಿಭಟನೆ ನಡೆಸಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿ ವಾಹನಗಳು ಸಾಲು ಸಾಲಾಗಿ ನಿಂತ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕೆ ಮನಗೂಳಿ ಪೊಲೀಸರು ಆಗಮಿಸಿದ್ದು, ಪ್ರತಿಭಟನಾ ನಿರತರ ಮನವೊಲಿಕೆಗೆ ಯತ್ನಿಸಿದ್ದಾರೆ. ಆದಾಗ್ಯೂ ಒಪ್ಪದ ಗ್ರಾಮಸ್ಥರು ಪ್ರತಿಭಟನೆ ಮುಂದುವರೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular