HomeLatest NewsBREAKING : ಬೆಂಗಳೂರಲ್ಲಿ ಮತ್ತೊಂದು ಅಪಘಾತ :  ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ...

BREAKING : ಬೆಂಗಳೂರಲ್ಲಿ ಮತ್ತೊಂದು ಅಪಘಾತ :  ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಸಾವು!

ಬೆಂಗಳೂರು: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.

ನೆಲಮಂಗಲದ ಕುಣಿಗಲ್ ಬೈಪಾಸ್ ಬಳಿ ಈ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿದ್ದ ಇಬ್ಬರೂ ಮೃತಪಟ್ಟಿದ್ದಾರೆ. ಮೃತರನ್ನು ಬೆಂಗಳೂರಿನ ಶ್ರೀರಾಂಪುರದ ಪ್ರಜ್ವಲ್ (21) ಹಾಗೂ ಸಹನಾ (31) ಮೃತ ದುರ್ದೈವಿಗಳು.

ಕುಣಿಗಲ್ ನಿಂದ ಬೆಂಗಳೂರಿಗೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸದ್ಯ ಪೊಲೀಸರು ಲಾರಿ ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular