HomeKarnatakaBREAKING: ಲಾರಿ-ಬೈಕ್ ಭೀಕರ ಅಪಘಾತ: ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವು

BREAKING: ಲಾರಿ-ಬೈಕ್ ಭೀಕರ ಅಪಘಾತ: ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಬೆಂಗಳೂರು: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಗೊಟ್ಟಿಗೆರೆಯ ನೈಸ್ ರಸ್ತೆಯಲ್ಲಿ ನಡೆದಿದೆ.

ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆ ನೈಸ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ವಿ ವೈಶ್ಯ ಕಾಲೇಜು ವಿದ್ಯಾರ್ಥಿ ಚಿರಾಗ್ (19) ಮೃತ ದುರ್ದೈವಿ. ಚಿರಾಗ್ ಹಾಗೂ ಇಂಚರಾ ಎಂಬ ವಿದ್ಯಾರ್ಥಿನಿ ಊಟಕ್ಕೆಂದು ಜಿಗಣಿ ಕೆಫೆಗೆ ಬಂದಿದ್ದಾಗ ಬೈಕ್ ಗೆ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ಬೈಕ್ ನಲ್ಲಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಚಿರಾಗ್ ಜೊತೆ ಬೈಕ್ ನಲ್ಲಿದ್ದ ಇಂಚರಾ ಸ್ಥಿತಿ ಗಂಭೀರವಾಗಿದೆ. ಅಪಘಾತದ ಬಳಿಕ ಲಾರಿ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular