ರಾಯಚೂರು: ಲಾರಿ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 16 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರಿನ ಸಿಂಧನೂರು ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ಬಸ್ ನಲ್ಲಿದ್ದ 16 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಿಂಧನೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.