HomeLatest NewsBREAKING: ಸಿಮೆಂಟ್ ಲಾರಿ- ಬಸ್ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

BREAKING: ಸಿಮೆಂಟ್ ಲಾರಿ- ಬಸ್ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಮೈಸೂರು: ಸಿಮೆಂಟ್ ಲಾರಿ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ನಡೆದಿದೆ.

ಅಪಘಾತದ ಭೀಕರತೆಗೆ ಬಸ್ ಚಾಲಕ ಹಾಗೂ ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೈಸೂರಿನಿಂದ ಕೇರಳ ಕಡೆಗೆ ತೆರಳುತ್ತಿದ್ದ ಸಿಮೆಂಟ್ ಲಾರಿ ಹಾಗೂ ಕೇರಳದಿಂದ ಮೈಸೂರಿನತ್ತ ಬರುತ್ತಿದ್ದ ಬಸ್ ಗಳ ನಡ್ವೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.

ಅಪಘಾತಕ್ಕೀಡಾದ ಎರಡೂ ವಾಹನಗಳು ಕೇರಳ ಮೂಲದ್ದಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಹುಣಸೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular